
ಹೈದರಾಬಾದ್: ತೆಲಂಗಾಣ ಸರ್ಕಾರದ ಸಚಿವ ಸಂಪುಟಕ್ಕೆ ಈಚೆಗಷ್ಟೇ ಸೇರ್ಪಡೆಗೊಂಡ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರಿಗೆಗೆ ಎರಡು ಖಾತೆಗಳ ಹೊಣೆ ನೀಡಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಸಾರ್ವಜನಿಕ ಉದ್ಯಮಗಳ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಮುಖ್ಯ ಕಾರ್ಯದರ್ಶಿ ಕೆ. ರಾಮಕೃಷ್ಣ ರಾವ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಇದುವರೆಗೂ ಸಾರ್ವಜನಿಕ ಉದ್ಯಮಗಳ ಖಾತೆಯನ್ನು ನಿರ್ವಹಿಸುತ್ತಿದ್ದರೆ, ಸಚಿವ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರು ಅಲ್ಪಸಂಖ್ಯಾತರ ಕಲ್ಯಾಣ ಖಾತೆಯನ್ನು ನಿಭಾಯಿಸುತ್ತಿದ್ದರು.
ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ನ. 11ರಂದು ಉಪ ಚುನಾವಣೆ ನಡೆಯಲಿದ್ದು, ಕ್ಷೇತ್ರದಲ್ಲಿರುವ 1 ಲಕ್ಷ ಮುಸ್ಲಿಂ ಮತದಾರರ ಮನವೊಲಿಕೆಗಾಗಿ ಅಜರುದ್ದೀನ್ ಅವರನ್ನು ಕಾಂಗ್ರೆಸ್ ಸಚಿವರನ್ನಾಗಿ ಮಾಡಿದೆ ಎನ್ನಲಾಗಿದೆ.
ಅಜರುದ್ದೀನ್ ಅ. 31ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.