ADVERTISEMENT

ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ಗೆ ಕೋವಿಡ್-19 ದೃಢ

ಏಜೆನ್ಸೀಸ್
Published 19 ಏಪ್ರಿಲ್ 2021, 14:31 IST
Last Updated 19 ಏಪ್ರಿಲ್ 2021, 14:31 IST
ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್
ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್   

ಹೈದರಾಬಾದ್:ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೋವಿಡ್-19 ದೃಢಪಟ್ಟಿದೆ ಎಂದು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರ ಅಧಿಕೃತ ಪ್ರಕಟಣೆ ಸೋಮವಾರ ತಿಳಿಸಿದೆ.

ಸೌಮ್ಯ ಲಕ್ಷಣಗಳನ್ನು ಹೊಂದಿದ್ದ ಅವರೀಗ ಐಸೋಲೇಶನ್‌ನಲ್ಲಿದ್ದಾರೆ. ಸದ್ಯ ಅವರ ತೋಟದ ಮನೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಡುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಏಪ್ರಿಲ್ 14 ರಂದು ನಲ್ಗೊಂಡ ಜಿಲ್ಲೆಯ ಹಲಿಯಾದಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.