ರಾಹುಲ್ ಗಾಂಧಿ ಹಾಗೂ ರೇವಂತ ರೆಡ್ಡಿ
ಪಿಟಿಐ ಚಿತ್ರ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿಯಾದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ತೆಲಂಗಾಣದಲ್ಲಿ ನಡೆಸಲಾಗಿರುವ ಜಾತಿ ಗಣತಿಯ ಕುರಿತು ಚರ್ಚಿಸಿದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಹುಲ್ ಜೊತೆ ರೇವಂತ ರೆಡ್ಡಿ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.
ಫೆ. 4ರಂದು ತೆಲಂಗಾಣ ವಿಧಾನಸಭೆಯಲ್ಲಿ ಜನಗಣತಿಯ ಸಂಕ್ಷಿಪ್ತ ಮಾಹಿತಿಯನ್ನಷ್ಟೇ ಚರ್ಚಿಸಲಾಗಿತ್ತು. ಇದೇ ಮಾದರಿಯ ಜನಗಣತಿಯನ್ನು ರಾಷ್ಟ್ರವ್ಯಾಪಿ ನಡೆಸಬೇಕು ಎಂದು ರೇವಂತ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.
ಸಭೆಯ ನಂತರ ಮುಖ್ಯಮಂತ್ರಿ ರೇವಂತ ಅವರು ಹೈದರಾಬಾದ್‌ಗೆ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.