ADVERTISEMENT

ಭಾರತ್‌ ಜೋಡೊ ನ್ಯಾಯ ಯಾತ್ರೆಯಲ್ಲಿ ತೆಲಂಗಾಣ ಸಿಎಂ ಭಾಗಿಯಾಗುವ ಸಾಧ್ಯತೆ

ಪಿಟಿಐ
Published 13 ಜನವರಿ 2024, 10:22 IST
Last Updated 13 ಜನವರಿ 2024, 10:22 IST
<div class="paragraphs"><p>ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ</p></div>

ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ

   

ಹೈದರಾಬಾದ್‌: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಾಳೆ (ಭಾನುವಾರ) ಮಣಿಪುರದ ಇಂಫಾಲ್‌ನಲ್ಲಿ ಆರಂಭವಾಗಲಿರುವ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಇಂದು (ಶನಿವಾರ) ರಾಷ್ಟ್ರ ರಾಜಧಾನಿ ದೆಹಲಿಗೆ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.

ADVERTISEMENT

ನಾಳೆ ಬೆಳಿಗ್ಗೆ ಸಿಎಂ ರೇವಂತ್‌ ರೆಡ್ಡಿ ಮಣಿಪುರಕ್ಕೆ ತೆರಳಿ ‘ಭಾರತ್‌ ಜೋಡೋ ನ್ಯಾಯ ಯಾತ್ರೆ’ಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಂತರ ದೆಹಲಿಗೆ ಹಿಂದಿರುಗಿ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಲು ದಾವೋಸ್‌ಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜ.14ರಿಂದ ಮಣಿಪುರದ ಇಂಫಾಲ್‌ನಿಂದ ಮುಂಬೈವರೆಗೆ ‘ಭಾರತ್‌ ಜೋಡೊ ನ್ಯಾಯ ಯಾತ್ರೆ’ಯನ್ನು ಕೈಗೊಳ್ಳಲಿದ್ದಾರೆ. ಈ ಯಾತ್ರೆಯು ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಂಚರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.