ನವದೆಹಲಿ: ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಸರ್ಕಾರದಿಂದ ಬಾಕಿ ಇರುವ ಯೋಜನೆಗಳು ಮತ್ತು ಅನುದಾನ ಬಿಡುಗಡೆ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿತು. ಜತೆಗೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ. ರೇವಂತ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.