ADVERTISEMENT

ದ್ವೇಷ ಭಾಷಣ: ಅಕ್ಬರುದ್ಧೀನ್ ಓವೈಸಿ ದೋಷಮುಕ್ತ

ಪಿಟಿಐ
Published 13 ಏಪ್ರಿಲ್ 2022, 14:17 IST
Last Updated 13 ಏಪ್ರಿಲ್ 2022, 14:17 IST
   

ಹೈದರಾಬಾದ್‌: ದಶಕದ ಹಿಂದೆ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣಗಳಲ್ಲಿ ಅವರನ್ನು ಇಲ್ಲಿನ ನ್ಯಾಯಾಲಯವು ಬುಧವಾರ ಖುಲಾಸೆಗೊಳಿಸಿದೆ.

ಸಂಸದರು, ಶಾಸಕರ ವಿಚಾರಣೆಗಾಗಿ ಇರುವ ವಿಶೇಷ ಸೆಷನ್ಸ್ ನ್ಯಾಯಾಲಯವು ಈ ತೀರ್ಪು ಪ್ರಕಟಿಸಿದೆ. ತೀರ್ಪು ಪ್ರಕಟಣೆಯ ವೇಳೆ ಅಕ್ಬರುದ್ದೀನ್ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು.

ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಅವರು 2012 ಡಿಸೆಂಬರ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭಗಳಲ್ಲಿ ದ್ವೇಷಭಾಷಣಗಳನ್ನು ಮಾಡಿದ್ದಾರೆ ಎನ್ನುವ ಆರೋಪ ಹೊಂದಿದ್ದರು. ಈ ಕಾರಣಕ್ಕಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ‌ಪ್ರಕರಣ ದಾಖಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.