ADVERTISEMENT

ತೆಲಂಗಾಣದಲ್ಲಿ ಜೂ.20ರಿಂದ ಲಾಕ್‌ಡೌನ್ ತೆರವು; ಜು.1ರಿಂದ ಶಿಕ್ಷಣ ಸಂಸ್ಥೆಗಳ ಆರಂಭ

ಪಿಟಿಐ
Published 19 ಜೂನ್ 2021, 13:08 IST
Last Updated 19 ಜೂನ್ 2021, 13:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್: ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಹೇರಲಾಗಿರುವ ಕೋವಿಡ್-19 ಲಾಕ್‌ಡೌನ್ ನಿರ್ಬಂಧಗಳನ್ನು ಜೂನ್ 20ರಿಂದ (ಭಾನುವಾರ) ತೆರವುಗೊಳಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ಕೊರೊನಾವೈರಸ್ ಪ್ರಕರಣಗಳಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಲಾಕ್‌ಡೌನ್ ತೆರವುಗೊಳಿಸಲು ನಿರ್ಧರಿಸಲಾಗಿದ್ದು, ಶಿಕ್ಷಣ ಸಂಸ್ಥೆಗಳು ಜುಲೈ 1ರಿಂದ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

ಶನಿವಾರ ಸೇರಿದ ತೆಲಂಗಾಣ ಸರ್ಕಾರದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಾಕ್‌ಡೌನ್ ವೇಳೆಯಲ್ಲಿ ಹೇರಲಾಗಿರುವ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೆಲಂಗಾಣದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಇಳಿಮುಖವಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯಕೀಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ವರದಿಗಳನ್ನು ಪರಿಶೀಲಿಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಶುಕ್ರವಾರದಂದು ತೆಲಂಗಾಣದಲ್ಲಿ 1,417 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿದ್ದವು. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 6,10,834ಕ್ಕೆ ಏರಿಕೆಯಾಗಿದೆ.

ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮೇ 12ರಂದು ತೆಲಂಗಾಣದಲ್ಲಿ ಮೊದಲ ಬಾರಿಗೆ ಲಾಕ್‌ಡೌನ್ ಹೇರಲಾಗಿತ್ತು. ಬಳಿಕ ಜೂನ್ 8ರಂದು ಲಾಕ್‌ಡೌನ್ ವಿಸ್ತರಿಸಲು ನಿರ್ಧರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.