ADVERTISEMENT

ತೆಲಂಗಾಣ ಕಾಂಗ್ರೆಸ್ ಮಾಜಿ ಸಚಿವೆ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 9:37 IST
Last Updated 20 ಮಾರ್ಚ್ 2019, 9:37 IST
ಅರುಣ
ಅರುಣ    

ನವದೆಹಲಿ:ತೆಲಂಗಾಣ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ಡಿ.ಕೆ.ಅರುಣಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನವದೆಹಲಿಯ ಪಕ್ಷದ ಕಚೇರಿಯಲ್ಲಿರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯಿಂದಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯಾಗಲಿದೆ ಎಂದು ತೆಲಂಗಾಣ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ತೆಲಂಗಾಣ ಕಾಂಗ್ರೆಸ್ ನ ಮಾಜಿ ಸಚಿವೆಯೂ ಆಗಿರುವಡಿ.ಕೆ.ಅರುಣಾ ಇಲ್ಲಿನ ಮೆಹಬೂಬಾನಗರದ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅರುಣಾ ಅವರು 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗಡ್ವಾಲ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ADVERTISEMENT

ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲು ಶ್ರಮ

ತೆಲಂಗಾಣದಲ್ಲಿ ಟಿಆರ್ ಎಸ್ ಗೆ ಪರ್ಯಾಯವಾಗಿ ಬಿಜೆಪಿಯನ್ನು ಬಲಪಡಿಸಲು ಶ್ರಮವಹಿಸಬೇಕಾಗಿದೆ. ಅಲ್ಲದೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಲು ನಾವು ಕೆಲಸ ಮಾಡಬೇಕಾಗಿದೆ ಎಂದು ಡಿ.ಕೆ.ಅರುಣಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಡಿ.ಕೆ.ಅರುಣಾ ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಸಹಜವಾಗಿ ಮೆಹಬೂಬಾನಗರದಲ್ಲಿ ಬಿಜೆಪಿಗೆ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ಎಂಎಲ್ ಸಿ ರಾಮಚಂದ್ರರಾವ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.