ADVERTISEMENT

Telangana Explosion: ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಘೋಷಿಸಿದ ಸಿಗಾಚಿ ಕಂಪನಿ

ಪಿಟಿಐ
Published 2 ಜುಲೈ 2025, 9:04 IST
Last Updated 2 ಜುಲೈ 2025, 9:04 IST
<div class="paragraphs"><p>ತೆಲಂಗಾಣ ಫಾರ್ಮಾ ಕಂಪನಿಯಲ್ಲಿ ಸಂಭವಿಸಿದ ಸ್ಫೋಟ</p></div>

ತೆಲಂಗಾಣ ಫಾರ್ಮಾ ಕಂಪನಿಯಲ್ಲಿ ಸಂಭವಿಸಿದ ಸ್ಫೋಟ

   

ಸಂಗಾರೆಡ್ಡಿ (ತೆಲಂಗಾಣ): ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಂಸ್ಥೆಯ 40 ಸದಸ್ಯರು ಮೃತಪಟ್ಟಿರುವುದಾಗಿ ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್ ತಿಳಿಸಿದೆ.

ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಕಂಪನಿಯು ಘೋಷಿಸಿದೆ.

ADVERTISEMENT

ಘಟನೆಯಲ್ಲಿ 33ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳ ವೈದ್ಯಕೀಯ ವೆಚ್ಚ ಭರಿಸುವುದಾಗಿ ಕಂಪನಿಯ ಪ್ರಕಟಣೆ ತಿಳಿಸಿದೆ.

ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ಸೋಮವಾರ ಸ್ಫೋಟ ಸಂಭವಿಸಿತ್ತು. ಸರ್ಕಾರದ ಅಂಕಿಅಂಶಗಳ ಪ್ರಕಾರ ಬುಧವಾರ ಬೆಳಿಗ್ಗೆಯವರೆಗೆ ಸಾವಿನ ಸಂಖ್ಯೆ 36 ಆಗಿತ್ತು.

ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಸಿಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಕಂಪನಿಯ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಲಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಂಗಳವಾರ ಹೇಳಿದ್ದರು. ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹10 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದವರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಅವರು ಪ್ರಕಟಿಸಿದ್ದರು.

ರಿಯಾಕ್ಟರ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ದುರಂತ ಸಂಭವಿಸಿಲ್ಲ ಎಂಬುದನ್ನು ಸಿಗಾಚಿ ಸ್ಪಷ್ಟಪಡಿಸಿದೆ. ತನಿಖೆಗಳ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದು, ಕಾರ್ಖಾನೆಯನ್ನು 90 ದಿನಗಳವರೆಗೆ ಮುಚ್ಚಲಾಗಿದೆ ಎಂದು ಹೇಳಿದೆ.

ಈ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸಿಗಾಚಿ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.