ADVERTISEMENT

ತೆಲಂಗಾಣ ಕಾರ್ಖಾನೆ ಸ್ಫೋಟ | DNA ಪರೀಕ್ಷೆ ವಿಫಲ: ಪತ್ತೆಯಾಗದ ಕಾರ್ಮಿಕರ ಗುರುತು

ಏಜೆನ್ಸೀಸ್
Published 9 ಜುಲೈ 2025, 14:45 IST
Last Updated 9 ಜುಲೈ 2025, 14:45 IST
<div class="paragraphs"><p>ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ್ದ ಸ್ಫೋಟ</p></div>

ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ್ದ ಸ್ಫೋಟ

   

ಹೈದರಾಬಾದ್‌: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪತ್ತೆಯಾದ ಮಾನವ ದೇಹದ ಭಾಗಗಳ ಮಾದರಿಗಳು ನಾಪತ್ತೆಯಾಗಿರುವ ಎಂಟು ಕಾರ್ಮಿಕರ ಕುಟುಂಬಸ್ಥರ ಡಿಎನ್‌ಎಗೆ ಹೊಂದಾಣಿಕೆಯಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಎನ್‌ಎಗೆ ಹೊಂದಾಣಿಕೆಯಾಗದ ಕಾರಣ ನಾಪತ್ತೆಯಾಗಿರುವ ಕಾರ್ಮಿಕರ ಗುರುತು ಪತ್ತೆಹಚ್ಚುವಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ನಾಪತ್ತೆಯಾದವರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇದರ ಬೆನ್ನಲ್ಲೇ ಕಾಣೆಯಾದ ಕಾರ್ಮಿಕರ ಕುಟುಂಬಗಳಿಗೆ ತಲಾ ₹15 ಲಕ್ಷ ಮಧ್ಯಂತರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹೆಚ್ಚಿನ ತನಿಖೆ ಬಳಿಕ ಕಾರ್ಮಿಕರು ಅಧಿಕೃತವಾಗಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರೇ ಈ ಹಿಂದೆ ಘೋಷಿಸಲಾದ ₹1 ಕೋಟಿ ಪರಿಹಾರದ ಭಾಗವಾಗಿ ಉಳಿದ ಮೊತ್ತವನ್ನು ಕಾರ್ಮಿಕರ ಕುಟುಂಬಗಳಿಗೆ ವಿತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಶಮೈಲಾರಂ ಕೈಗಾರಿಕಾ ಪ್ರದೇಶ ದಲ್ಲಿರುವ ಕಾರ್ಖಾನೆಯ ರಿಯಾಕ್ಟರ್‌ನಲ್ಲಿ ಜೂನ್ 30ರಂದು ಸ್ಫೋಟ ಸಂಭವಿಸಿತ್ತು. ದುರಂತ ಸಂಭವಿಸಿದ ವೇಳೆ 143 ಮಂದಿ ಕೆಲಸ ಮಾಡುತ್ತಿದ್ದರು. ಈ ಪೈಕಿ 61 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಿಡುಗಡೆಯಾಗಿದ್ದಾರೆ. ಉಳಿದ 8 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪರಿತೋಷ್‌ ಪಂಕಜ್‌ ತಿಳಿಸಿದ್ದಾರೆ.

42 ಜನರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ದುರಂತದಲ್ಲಿ 42 ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಕಂಪನಿಯ ಆಡಳಿತ ಮಂಡಳಿ ಹೇಳಿದ್ದು, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.