ತೆಲಂಗಾಣದ ಔಷಧ ಕಾರ್ಖಾನೆ ಸ್ಫೋಟ
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ನಂತರ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸ್ಫೋಟದ ನಂತರ ನಾಪತ್ತೆಯಾದ ಎಂಟು ಮಂದಿ ಬಗ್ಗೆ ಈವರೆಗೆ ಯಾವುದೇ ಕುರುಹು ಲಭ್ಯವಾಗಿಲ್ಲ.
ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ 100ಕ್ಕೂ ಹೆಚ್ಚು ದೇಹದ ಭಾಗಗಳು ಪತ್ತೆಯಾಗಿವೆ. ಅವುಗಳ ಗುರುತು ಪತ್ತೆಗಾಗಿ ಸಂಬಂಧಿಕರ ರಕ್ತದ ಮಾದರಿಯೊಂದಿಗೆ ಡಿಎನ್‌ಎ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.