
ತಮಿಳಿಸೈ ಸೌಂದರ್ಯರಾಜನ್
(ಪಿಟಿಐ ಚಿತ್ರ)
ಹೈದರಾಬಾದ್/ಪುದುಚೇರಿ: ತೆಲಂಗಾಣ ರಾಜ್ಯಪಾಲರಾದ ತಮಿಳ್ ಇಸೈ ಸೌಂದರರಾಜನ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ಸೋಮವಾರ ತಿಳಿಸಿದೆ.
'ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಸೌಂದರರಾಜನ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ' ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲಾಗಿದೆ ಎಂದು ವರದಿಯಾಗಿದೆ.
ಸೌಂದರರಾಜನ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ತಮಿಳುನಾಡಿನ ತೂತುಕುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಡಿಎಂಕೆಯ ಕನಿಮೋಳಿ ವಿರುದ್ಧ ಸೋತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.