ಹೈದರಾಬಾದ್: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡ 42ರಷ್ಟು ಮೀಸಲಾತಿ ಕಲ್ಪಿಸುವ ಎರಡು ಮಸೂದೆಗಳನ್ನು ತೆಲಂಗಾಣ ವಿಧಾನಸಭೆ ಭಾನುವಾರ ಅಂಗೀಕರಿಸಿದೆ.
ಮಸೂದೆ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ,‘ಹೈಕೋರ್ಟ್ ಆದೇಶದಂತೆ ಸ್ಥಳೀಯ ಸಂಸ್ಥೆಗಳಿಗೆ ಸೆಪ್ಟೆಂಬರ್ 30ರ ಒಳಗಾಗಿ ಚುನಾವಣೆ ನಡೆಸಬೇಕಿದೆ’ ಎಂದು ಹೇಳಿದರು.
ಇದೇ ವಿಚಾರಕ್ಕೆ ಸಂಬಂಧಿಸಿ 2018ರಲ್ಲಿ ರೂಪಿಸಿದ್ದ ಕಾಯ್ದೆಗೆ ತಿದ್ದುಪಡಿ ತರುವುದಕ್ಕಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.