ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ್ದ ಸ್ಫೋಟ
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 41ಕ್ಕೇರಿದೆ. ಮೃತ ವ್ಯಕ್ತಿಯು ತೀವ್ರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ.
‘ದುರಂತ ಸಂಭವಿಸಿದ ವೇಳೆ 143 ಮಂದಿ ಕೆಲಸ ಮಾಡುತ್ತಿದ್ದರು. ಈ ಪೈಕಿ 61 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. 14 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಿಡುಗಡೆಯಾಗಿದ್ದಾರೆ. ಉಳಿದ 9 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.
40 ಜನರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ದುರಂತದಲ್ಲಿ 41 ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಕಂಪನಿಯ ಆಡಳಿತ ಮಂಡಳಿ ಹೇಳಿದ್ದು, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.