ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಉಪಕರಣಗಳು ಚೆಲ್ಲಾಪಿಲ್ಲಿಯಾಗಿರುವುದು–
ಪಿಟಿಐ ಚಿತ್ರ
ಹೈದರಾಬಾದ್: ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ಗಾಯಾಳುಗಳಲ್ಲಿ ಒಬ್ಬರು ಶನಿವಾರ ಮೃತಪಟ್ಟಿದ್ದಾರೆ. ಇದರಿಂದ ದುರಂತದಲ್ಲಿ ಬಲಿಯಾದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
ಜೂನ್ 30ರಂದು ನಡೆದ ಸ್ಫೋಟದಲ್ಲಿ ಉತ್ತರ ಪ್ರದೇಶದ 48 ವರ್ಷದ ಕಾರ್ಮಿಕರೊಬ್ಬರಿಗೆ ಶೇಕಡ 70ರಷ್ಟು ಸುಟ್ಟ ಗಾಯಗಳಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 19 ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಂಗಾರೆಡ್ಡಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ದುರಂತದಲ್ಲಿ ಇನ್ನೂ 9 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದಿದ್ದಾರೆ.
ಡಿಎನ್‌ಎ ಪರೀಕ್ಷೆ ಮೂಲಕ ಮೃತದೇಹಗಳ ಗುರುತು ಪತ್ತೆಹಚ್ಚುವ ಮತ್ತು ಅವುಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.