ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಗಜ್ವೆಲ್ ಮತ್ತು ಕಾಮರೆಡ್ಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಗುರುವಾರ) ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಧ್ಯಾಹ್ನ ಕಾಮರೆಡ್ಡಿ ಕ್ಷೇತ್ರದಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಕೆಸಿಆರ್ ಮಾತನಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನವೆಂಬರ್ 4ರಂದು ಸಿದ್ದಿಪೇಟೆ ಜಿಲ್ಲೆಯ ಕೋನೈಪಲ್ಲಿಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೆಸಿಆರ್ ಭೇಟಿ ನೀಡಿ, ದೇವಸ್ಥಾನದ ಗರ್ಭಗುಡಿಯಲ್ಲಿ ನಾಮಪತ್ರ ಇಟ್ಟು, ವಿಶೇಷ ಪೂಜೆ ಸಲ್ಲಿಸಿದ್ದರು.
ಚುನಾವಣೆಗಾಗಿ ನವೆಂಬರ್ 13 ರಿಂದ 28 ರವರೆಗೆ 54 'ಪ್ರಜಾ ಆಶೀರ್ವಾದ' ರ್‍ಯಾಲಿಗಳನ್ನು ನಡೆಸಲು ನಿರ್ಧರಿಸಿದ್ದು, ನವೆಂಬರ್ 28ರಂದು ಗಜ್ವೆಲ್‌ನಲ್ಲಿ ಅಂತಿಮ ರ್‍ಯಾಲಿಯನ್ನು ಉದ್ದೇಶಿಸಿ ಕೆಸಿಆರ್ ಮಾತನಾಡಲಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯು ನವೆಂಬರ್ 30ರಂದು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.