ADVERTISEMENT

ರಂಗಾರೆಡ್ಡಿ ಬಳಿ ತೆಲಂಗಾಣ ಸಾರಿಗೆ ಬಸ್‌ಗೆ ಡಿಕ್ಕಿಯಾದ ಟಿಪ್ಪರ್: 19 ಜನ ಸಾವು

ಪಿಟಿಐ
Published 3 ನವೆಂಬರ್ 2025, 4:54 IST
Last Updated 3 ನವೆಂಬರ್ 2025, 4:54 IST
   

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು (ಸೋಮವಾರ) ಬೆಳ್ಳಿಗೆ ಟಿಪ್ಪರ್‌ ಲಾರಿ ಮತ್ತು ಸರ್ಕಾರಿ ಬಸ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 19 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿದೆ. ಮೃತಪಟ್ಟ 19 ಜನರ ಪೈಕಿ 10 ಮಂದಿ ಮಹಿಳೆಯರು ಸೇರಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಿಪ್ಪರ್‌ ಲಾರಿಯಲ್ಲಿ ಸಾಗಿಸುತ್ತಿದ್ದ ಜಲ್ಲಿ ಕಲ್ಲು ಬಸ್‌ ಮೇಲೆ ಬಿದ್ದ ಪರಿಣಾಮ ಜನರು ಬಸ್‌ ಒಳಗೆ ಸಿಲುಕಿಕೊಂಡಿದ್ದರು. ಯಂತ್ರಗಳ ಸಹಾಯದಿಂದ ಉಳಿದ ಪ್ರಯಾಣಿಕರನ್ನು ಹೊರಗೆ ಕರೆತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮೃತರನ್ನು ತಕ್ಷಣಕ್ಕೆ ಗುರುತಿಸಲು ಆಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌

ಈ ಘಟನೆ ಸಂಬಂಧ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದು, ಪರಿಹಾರ ಕಾರ್ಯ ತಕ್ಷಣವೇ ಒದಗಿಸುವಂತೆ ಹಾಗೂ ಗಾಯಗೊಂಡವರನ್ನು ಹೈದರಾಬಾದ್‌ ಆಸ್ಪತ್ರೆಗೆ ಕರೆದೊಯ್ಯುವಂತೆ ಅಧಿಕಾರಗಳಿಗೆ ಸೂಚನೆ ನೀಡಿದ್ದಾರೆ.

ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.