ADVERTISEMENT

ಶಾಸಕರ ಅನರ್ಹತೆ ಪ್ರಕರಣ: ತೆಲಂಗಾಣ ಸ್ಪೀಕರ್‌ಗೆ ‌ನ್ಯಾಯಾಂಗ ನಿಂದನೆ ನೋಟಿಸ್‌

ಪಿಟಿಐ
Published 17 ನವೆಂಬರ್ 2025, 13:56 IST
Last Updated 17 ನವೆಂಬರ್ 2025, 13:56 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಆಡಳಿತಾರೂಢ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ ಬಿಆರ್‌ಎಸ್‌ ಪಕ್ಷದ 10 ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ನೀಡಿದ ನಿರ್ದೇಶನವನ್ನು ಪಾಲಿಸದಿದ್ದಕ್ಕಾಗಿ ತೆಲಂಗಾಣದ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್‌ ಸೋಮವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಜುಲೈ 31ರಂದು ಭಾರತ ರಾಷ್ಟ್ರ ಸಮಿತಿ(ಬಿಆರ್‌ಎಸ್‌) ಪಕ್ಷದ 10 ಶಾಸಕರ ಅನರ್ಹತೆಯ ವಿಷಯವನ್ನು ಮೂರು ತಿಂಗಳಲ್ಲಿ ನಿರ್ಧರಿಸುವಂತೆ ವಿಧಾನಸಭಾ ಸ್ಪೀಕರ್‌ಗೆ ನಿರ್ದೇಶನ ನೀಡಿತ್ತು.

ಸಿಜೆಐ ನೇತೃತ್ವದ ಪೀಠವು ನೀಡಿದ್ದ ನಿರ್ದೇಶನಗಳನ್ನು ಪಾಲಿಸದಿರುವುದು ‘ಅತ್ಯಂತ ಗಂಭೀರ ರೀತಿಯ ನ್ಯಾಯಾಂಗ ನಿಂದನೆ’ ಎಂದು ಹೇಳಿದ ನ್ಯಾಯಾಲಯ, ಬಿಆರ್‌ಎಸ್ ನಾಯಕರು ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್ ಮತ್ತು ಇತರರಿಗೆ ನೋಟಿಸ್ ನೀಡಿದೆ. ಆದರೆ, ಮುಂದಿನ ಆದೇಶದವರೆಗೆ ತೆಲಂಗಾಣದ ಸ್ಪೀಕರ್‌ ಮತ್ತು ಇತರರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.

ADVERTISEMENT

ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಎಂಟು ವಾರಗಳ ಕಾಲಾವಕಾಶ ನೀಡಬೇಕು ಎಂದು ವಿಧಾನಸಭಾಧ್ಯಕ್ಷರ ಕಚೇರಿಯ ಪರವಾಗಿ ಸಲ್ಲಿಸಲಾದ ಪ್ರತ್ಯೇಕ ಅರ್ಜಿ ಬಗ್ಗೆಯೂ ನ್ಯಾಯಪೀಠ ನೋಟಿಸ್ ಜಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.