ಹೈದರಾಬಾದ್: ತೆಲಂಗಾಣದ ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಇದನ್ನೂ ಓದಿ:ಆಂಧ್ರದ ಚಿತ್ತೂರಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 14 ಜನ ಆಸ್ಪತ್ರೆಗೆ ದಾಖಲು
ಪವರ್‌ಸ್ಟೇಷನ್‌ನಲ್ಲಿ ಸಿಲುಕಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತೆಲಂಗಾಣ ಸಚಿವ ಜಿ. ಜಗದೀಶ್ವರ್ ರೆಡ್ಡಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.