ADVERTISEMENT

ನೀತಿ ಆಯೋಗದ ಸಭೆ ಬಹಿಷ್ಕರಿಸಿದ ತೆಲಂಗಾಣ

ಪಿಟಿಐ
Published 24 ಜುಲೈ 2024, 15:36 IST
Last Updated 24 ಜುಲೈ 2024, 15:36 IST
ರೇವಂತ್‌ ರೆಡ್ಡಿ
ರೇವಂತ್‌ ರೆಡ್ಡಿ   

ಹೈದರಾಬಾದ್‌: ಇದೇ 27ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಬುಧವಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ತೆಲಂಗಾಣಕ್ಕೆ ಅಗತ್ಯ ಅನುದಾನ ನೀಡದೆ, ರಾಜ್ಯದ ಹಕ್ಕುಗಳನ್ನು ಘಾಸಿಗೊಳಿಸಿದೆ. ಹೀಗಾಗಿ, ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ರೆಡ್ಡಿ ಅವರು ತೆಲಂಗಾಣ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

‘ಪ್ರಧಾನ ಮಂತ್ರಿ ಅವರು ನೀತಿ ಆಯೋಗದ ಮುಖ್ಯಸ್ಥರಾಗಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಲಿದೆ. ಕೇಂದ್ರ ಸರ್ಕಾರವು ತೆಲಂಗಾಣದ ಹಿತಾಸಕ್ತಿಯನ್ನು ಕಡೆಗಣಿಸಿದ್ದು, ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದೆ. ಅಲ್ಲದೆ ರಾಜ್ಯದ ಯೋಜನೆಗಳಿಗೆ ಅನುಮತಿಯನ್ನೂ ನೀಡುತ್ತಿಲ್ಲ. ಹಾಗಾಗಿ ನಾನು ಈ ಸಭೆಗೆ ಹಾಜರಾಗದಿರಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.

ADVERTISEMENT

ಇದೇ ವೇಳೆ, ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ. ಪ್ರತಿಪಕ್ಷ ಬಿಜೆಪಿ ನಿರ್ಣಯವನ್ನು ವಿರೋಧಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.