ADVERTISEMENT

ಪಶ್ಚಿಮ ಬಂಗಾಳ | ದೇಗುಲದಲ್ಲಿ ಕಾಲ್ತುಳಿತ: ಮೂವರ ಸಾವು

ಪಿಟಿಐ
Published 23 ಆಗಸ್ಟ್ 2019, 20:15 IST
Last Updated 23 ಆಗಸ್ಟ್ 2019, 20:15 IST
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು –ಪಿಟಿಐ ಚಿತ್ರ
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು –ಪಿಟಿಐ ಚಿತ್ರ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಚುವಾ ಲೋಕನಾಥ ದೇವಾಲಯದಲ್ಲಿ ಶುಕ್ರವಾರ ಕಾಲ್ತುಳಿತ ಸಂಭವಿಸಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

18ನೇ ಶತಮಾನದಲ್ಲಿದ್ದ ಬಂಗಾಳದ ಸಂತ ಬಾಬಾ ಲೋಕನಾಥ ಬ್ರಹ್ಮಚಾರಿ ಅವರ ಜಯಂತಿ ಅಂಗವಾಗಿ ದೇವಾಲಯದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು.

‘ದೇವಾಲಯದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಈ ವೇಳೆ ಮಳೆ ಸುರಿದಿದೆ. ಮಳೆಯಿಂದ ರಕ್ಷಣೆ ಪಡೆಯಲು ಜನರು ಬಿದಿರಿನಿಂದ ನಿರ್ಮಿಸಿದ ಮಳಿಗೆಗಳಿಗೆ ನುಗ್ಗಿದ್ದಾರೆ. ಆಗ ಮಳಿಗೆ ಕುಸಿದಿದೆ. ಪರಿಣಾಮ ನೂಕುನುಗ್ಗಲು ಆರಂಭವಾಗಿ ಕಾಲ್ತುಳಿತ ಸಂಭವಿಸಿದೆ‘ ಎಂದು ಗಾಯಾಳುಗಳನ್ನು ಭೇಟಿಯಾದ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.