ADVERTISEMENT

ಜಮ್ಮು: ದೇವಾಲಯ ಮೂರ್ತಿ ಧ್ವಂಸ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 13:53 IST
Last Updated 9 ಏಪ್ರಿಲ್ 2022, 13:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಇಲ್ಲಿನ ಹೊರವಲಯದ ಸಿಧ್ರಾ ಪ್ರದೇಶದಲ್ಲಿ ದಶಕಗಳಷ್ಟು ಹಳೆಯದಾದ ಹಿಂದೂ ದೇವಾಲಯದ ದೇವರ ಮೂರ್ತಿಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

‘ದೇವಾಲಯದ ಮುಂಭಾಗದ ದೇವರ ಮೂರ್ತಿ ಹಾಗೂ ಗಣೇಶ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

‘ಶನಿವಾರ ಮುಂಜಾನೆ ಅರ್ಚಕರು ದೇವಾಲಯಕ್ಕೆ ಹೋದಾಗ ಮೂರ್ತಿಗಳು ಧ್ವಂಸಗೊಂಡಿರುವುದು ಬೆಳಕಿಗೆ ಬಂದಿದೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಅಧಿಕಾರಿಗಳ ತಂಡವು ತನಿಖೆ ಕೈಗೊಂಡಿದೆ. ಶುಕ್ರವಾರ ಮಧ್ಯರಾತ್ರಿ ದುಷ್ಕರ್ಮಿಗಳು ಈ ದುಷ್ಕೃತ್ಯ ನಡೆಸಿರಬಹುದು’ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.