ರಕ್ಷಣಾ ಕಾರ್ಯಾಚರಣೆ
(ಪಿಟಿಐ ಚಿತ್ರ)
ವಿಶಾಖಪಟ್ಟಣ: ಆಂಧ್ರಪ್ರದೇಶದ ಸಿಂಹಾಚಲಂನಲ್ಲಿ ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ನಸುಕಿನ ವೇಳೆ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾರಿ ಮಳೆಯಿಂದಾಗಿ ಮಣ್ಣು ಸಡಿಲಗೊಂಡಿರುವುದು ಅವಘಡಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ ಎಂದು ಆಂಧ್ರಪ್ರದೇಶದ ಗೃಹ ಸಚಿವೆ ವಿ. ಅನಿತಾ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯದ ತಂಡಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.