ಜಮ್ಮು: ಇಲ್ಲಿನ ದೋಡಾ ಜಿಲ್ಲೆಯಲ್ಲಿ ಮಂಗಳವಾರ ಪ್ರಯಾಣಿಕ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೋಡಾ–ಬಹ್ರತ್ ಮಾರ್ಗವಾಗಿ ಚಲಿಸುತ್ತಿದ್ದ ಟೆಂಪೊ ಟ್ರಾವೆಲ್ಲರ್ ಕಂದಕಕ್ಕೆ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ. ಗಾಯಗೊಂಡಿರುವ 17 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರನ್ನು ಮೊಹಮ್ಮದ್ ಅಶ್ರಫ್ (35), ಮಂಗ್ತಾ ವಾನಿ (51), ಅಟ್ಟಾ ಮೊಹಮ್ಮದ್ (33), ತಾಲಿಬ್ ಹುಸೈನ್ (35), ರಫೀಕಾ ಬೇಗಮ್ (60) ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.