ADVERTISEMENT

ಕರ್ನಾಟಕ, ದೆಹಲಿ, ಮಹಾರಾಷ್ಟ್ರದಲ್ಲಿ ಹೆಚ್ಚು ಕೋವಿಡ್‌ ಪ್ರಕರಣ: ಆರೋಗ್ಯ ಸಚಿವಾಲಯ

ದೇಶದ ಒಟ್ಟು ಪ್ರಕರಣಗಳಲ್ಲಿ ಶೇ 71ರಷ್ಟು ಹತ್ತು ರಾಜ್ಯಗಳಲ್ಲಿ ದಾಖಲು

ಪಿಟಿಐ
Published 4 ಮೇ 2021, 8:14 IST
Last Updated 4 ಮೇ 2021, 8:14 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶದಲ್ಲಿ ದಾಖಲಾಗಿರುವ 3,57,229 ಹೊಸ ಕೋವಿಡ್‌ ಪ್ರಕರಣಗಳಲ್ಲಿ ಶೇಕಡ 71.71ರಷ್ಟು ಪ್ರಕರಣಗಳು ಕರ್ನಾಟಕ, ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ 10 ರಾಜ್ಯಗಳಲ್ಲಿ ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ದೇಶದಲ್ಲಿ ನಿತ್ಯದ ಪಾಸಿಟಿವಿಟಿ ದರ ಶೇ 21.47ರಷ್ಟಿದೆ. ಅಂದರೆ ನೂರು ಮಂದಿ ಪರೀಕ್ಷೆ ಮಾಡಿದರೆ 21 ಮಂದಿಗೆ ಸೋಂಕು ದೃಢಪಡುತ್ತಿದೆ.

ಕಳೆದ ಒಂದು ದಿನದಲ್ಲಿ ಮಹಾರಾಷ್ಟ್ರದಲ್ಲಿ 48,621, ಕರ್ನಾಟಕದಲ್ಲಿ 44,438 ಮತ್ತು ಉತ್ತರ ಪ್ರದೇಶದಲ್ಲಿ 29,052 ಹೊಸ ಪ್ರಕರಣಗಳು ದಾಖಲಾಗಿವೆ.‌ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹತ್ತು ರಾಜ್ಯಗಳ ಪಟ್ಟಿಯಲ್ಲಿ ಕೇರಳ, ಉತ್ತರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ ಸ್ಥಾನಪಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.