ADVERTISEMENT

ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಶೇ 73 ಹೊಸ ಕೋವಿಡ್‌ ಪ್ರಕರಣಗಳು

ಪಿಟಿಐ
Published 10 ಮೇ 2021, 11:13 IST
Last Updated 10 ಮೇ 2021, 11:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ‘ದೇಶದಲ್ಲಿ ಒಂದೇ ದಿನ 3,66,161 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳಲ್ಲಿ ಶೇ 73.91ರಷ್ಟು ಪ್ರಕರಣಗಳು ಮಹಾರಾಷ್ಟ್ರ, ಕರ್ನಾಟಕ ಮತ್ತು ದೆಹಲಿ ಸೇರಿದಂತೆ 10 ರಾಜ್ಯಗಳಿಂದ ವರದಿಯಾಗಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಸೋಮವಾರ ತಿಳಿಸಿದೆ.

ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಹರಿಯಾಣ ಪಟ್ಟಿಯಲ್ಲಿರುವ ಇತರ ರಾಜ್ಯಗಳು.

ಮಹಾರಾಷ್ಟ್ರದಲ್ಲಿ ಹೊಸದಾಗಿ 48,401 ಕೋವಿಡ್ ಪ್ರಕರಣಗಳು ವರದಿಯಾಗಿದ್ದರೆ, ಕರ್ನಾಟಕದಲ್ಲಿ 47,930 ಹಾಗೂ ಕೇರಳದಲ್ಲಿ 35,801 ಹೊಸ ಪ್ರಕರಣಗಳು ವರದಿಯಾಗಿವೆ.

ADVERTISEMENT

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 37,45,237 ಆಗಿದ್ದು, ಒಟ್ಟಾರೆ ಸೋಂಕಿನ ಪ್ರಮಾಣ ಶೇ 16.53 ಆಗಿದೆ. ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 8,589ರಷ್ಟು ಪ್ರಕರಣಗಳು ಹೆಚ್ಚಾಗಿವೆ.

ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನ, ಆಂಧ್ರಪ್ರದೇಶ, ಗುಜರಾತ್, ಛತ್ತೀಸ್‌ಗಡ, ಪಶ್ಚಿಮ ಬಂಗಾಳ, ಹರಿಯಾಣ, ಬಿಹಾರ ಮತ್ತು ಮಧ್ಯಪ್ರದೇಶಗಳಲ್ಲಿ ಸೋಂಕಿನ ಪ್ರಮಾಣವು ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಶೇ. 82.89 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.

24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,754 ಸಾವುಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಅಂದರೆ 572 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 490 ಜನರು ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 1,86,71,222ಕ್ಕೆ ಏರಿದ್ದು, 24 ಗಂಟೆಗಳ ಅವಧಿಯಲ್ಲಿ 3,53,818 ಮಂದಿ ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.