ಶ್ರೀನಗರ: ರಾಜ್ಯದ 17 ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಸಿಆರ್‌ಪಿಎಫ್ ಹಾಗೂ ಕಥುವಾ ಪೊಲೀಸರು 10 ಮಂದಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಮಲ್ಹಾರ್, ಬಾನಿ ಮತ್ತು ಬಿಲ್ಲವರ್ ಜೊತೆಗೆ ಗಡಿ ಪ್ರದೇಶಗಳಾದ ಕಾನಾ ಚಕ್, ಹರಿಯಾ ಚಾಕ್, ಸ್ಪ್ರಾಲ್ ಪೇನ್ ಮತ್ತು ಚಾಕ್ ವಾಜಿರ್ ಲಾಬ್ಜುನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಬಂಧಿತರಿಂಧ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.