ನವದೆಹಲಿ: 10 ಮತ್ತು 12ನೇ ತರಗತಿಯ ಮೊದಲ ಅವಧಿಯ ಬೋರ್ಡ್ ಪರೀಕ್ಷೆಗಳನ್ನು ನವೆಂಬರ್– ಡಿಸೆಂಬರ್ ತಿಂಗಳಲ್ಲಿ ಆಫ್‌ಲೈನ್‌ನಲ್ಲಿ ನಡೆಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಗುರುವಾರ ತಿಳಿಸಿದೆ.
ವೇಳಾಪಟ್ಟಿಯನ್ನು ಇದೇ 18ರಂದು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಬಹು ಆಯ್ಕೆ ಪ್ರಶ್ನೆಗಳು ಇರಲಿವೆ. ಪರೀಕ್ಷೆಯ ಅವಧಿ 90 ನಿಮಿಷ. ಚಳಿಗಾಲದ ಕಾರಣದಿಂದ 10.30ರ ಬದಲಿಗೆ 11.30ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಮಂಡಳಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.