ADVERTISEMENT

ಭಯೋತ್ಪಾದನಾ ಕೃತ್ಯಕ್ಕೆ ಯೋಜಿಸಿದ್ದ ಮಹಿಳೆಗೆ ಕೋವಿಡ್‌–19 ದೃಢ

ಪಿಟಿಐ
Published 7 ಜೂನ್ 2020, 14:40 IST
Last Updated 7 ಜೂನ್ 2020, 14:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸಿಎಎ ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ದೇಶದಲ್ಲಿಭಯೋತ್ಪಾದನಾ ದಾಳಿ ನಡೆಸಲು ಯೋಜಿಸಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಕಾಶ್ಮೀರದ ಮಹಿಳೆಯೊಬ್ಬರಿಗೆ ಕೋವಿಡ್‌–19 ಇರುವುದು ದೃಢಪಟ್ಟಿದ್ದು, ಆಕೆಗೆ ಚಿಕಿತ್ಸೆ ನೀಡಬೇಕೆಂದು ದೆಹಲಿ ಮೆಟ್ರೊಪಾಲಿಟನ್ ನ್ಯಾಯಾಲಯ ಆದೇಶಿಸಿದೆ.

ಬಂಧಿತ ಮಹಿಳೆ ಹೀನಾ ಬಶೀರ್ ಬೇಗ್‌ಗೆ ಕೋವಿಡ್–19 ಇರುವುದು ಪರೀಕ್ಷೆಯ ಮೂಲಕ ದೃಢಪಟ್ಟಿತ್ತು. ಈ ಸಂಬಂಧ ವೈದ್ಯಕೀಯ ವರದಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನ್ಯಾಯಾಲಯದ ಗಮನಕ್ಕೆ ತಂದಿತ್ತು.

ಜುಲೈ 4ರವರೆಗೆ ಹೀನಾ ಬಶೀರ್ ಬೀಗ್, ಅವರ ಪತಿ ಜಹನಾಜ್‌ಜೈಬ್ ಮತ್ತು ಅಬ್ದುಲ್ ಬಸಿತ್ ಅವರನ್ನು ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಕೋರಿ ಎನ್ಐಎ ದೆಹಲಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸಿತ್ತು. ಆರೋಪಿಗೆ ಮಹಿಳೆಗೆ ಕೋವಿಡ್‌–19 ದೃಢಪಟ್ಟಿರುವುದರಿಂದ ಆಕೆಗೆ ತಕ್ಷಣವೇ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಬೇಕು. ಚಿಕಿತ್ಸೆ ಪೂರ್ಣಗೊಂಡ ಬಳಿಕ ಆಕೆಯನ್ನು ಜುಲೈ 4ರ ತನಕ ತಿಹಾರ್ ಜೈಲಿನಲ್ಲಿರಿಸಬೇಕು ಎಂದು ಕೋರ್ಟ್ ಆದೇಶಿಸಿದೆ.

ADVERTISEMENT

ಬಂಧಿತ ಮೂವರು ಆರೋಪಿಗಳೂ ಇಸ್ಲಾಮಿಕ್ ಸ್ಟೇಟ್ ಖೋರಾಸಾನ್ ಪ್ರಾಂತ್ಯ (ಐಎಸ್‌ಕೆಪಿ) ಜತೆ ನಂಟು ಹೊಂದಿದ್ದು, ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕವು ಬಂಧಿಸಿತ್ತು. ಮಾರ್ಚ್ 23ರಂದು ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.