ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ
–ರಾಯಿಟರ್ಸ್ ಚಿತ್ರ
ಅಲಿಗಢ: ಭಯೋತ್ಪಾದಕ ಬೆದರಿಕೆಯ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಎಚ್ಚರಿಕೆ ಬಂದ ಬೆನ್ನಲ್ಲೇ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಪ್ರವೇಶ ದ್ವಾರಗಳಲ್ಲಿ ತಪಾಸಣೆ ಕಾರ್ಯವಿಧಾನಗಳನ್ನು ಹೆಚ್ಚಿಸಿದ್ದೇವೆ ಎಂದು ಎಎಂಯು ಶಿಸ್ತುಪಾಲಕ ಮೊಹಮ್ಮದ್ ವಸೀಮ್ ಅಲಿ ಹೇಳಿದ್ದಾರೆ.
ಲಭ್ಯವಿರುವ ಸಂಪನ್ಮೂಲಗಳ ಮಿತಿಯೊಳಗೆ ಎಲ್ಲಾ ಸಂಭಾವ್ಯ ಭದ್ರತಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಭದ್ರತಾ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಯೋಜಿಸಿದ್ದಾರೆ ಎಂದು ಅಲಿ ಹೇಳಿದ್ದಾರೆ.
ವಿಶ್ವವಿದ್ಯಾಲಯದ ಅಧಿಕಾರಿಗಳು ನಮ್ಮನ್ನು ಸಂಪರ್ಕಿಸಿದರೆ, ನಾವು ನಮ್ಮ ಕಡೆಯಿಂದ ಸಿದ್ಧತೆಗಳನ್ನು ಪರಿಶೀಲಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.