ಭದ್ರತಾ ಸಿಬ್ಬಂದಿ
ಪಿಟಿಐ ಚಿತ್ರ
ಶ್ರೀನಗರ: ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಕಣಿವೆಯ ಹಲವೆಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯ ನಾಲ್ಕು ಜಿಲ್ಲೆಗಳ 10 ಸ್ಥಳಗಳಲ್ಲಿ ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ (ಸಿಐಕೆ) ವಿಭಾಗದ ತಂಡಗಳು ಶೋಧ ನಡೆಸುತ್ತಿವೆ.
ಉಗ್ರ ಸಂಘಟನೆಗಳ ಸ್ಲೀಪರ್ ಸೆಲ್‌ಗಳು ಮತ್ತು ನೇಮಕಾತಿ ಘಟಕಗಳ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ.
ಗಂಡೇರ್‌ಬಾಲ್‌ನ ಆರು ಸ್ಥಳಗಳು, ಬುದಗಾಮ್‌ನಲ್ಲಿ ಎರಡು ಕಡೆ ಹಾಗೂ ಪುಲ್ವಾಮಾ, ಶ್ರೀನಗರದ ಒಂದೊಂದು ಕಡೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.