ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಗ್ರೆನೆಡ್ ಸ್ಪೋಟ; ಯೋಧ ಸಾವು: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕರ್ನಾ ವಲಯದಲ್ಲಿ ಶನಿವಾರ ಗ್ರೆನೆಡ್ ಸ್ಪೋಟದಿಂದ ಹೊತ್ತಿಕೊಂಡ ಬೆಂಕಿ ಅವಘಢದಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ.
‘ಇಬ್ಬರು ಯೋಧರು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಒಬ್ಬರು ಮೃತಪಟ್ಟರು’ ಎಂದು ಕುಪ್ವಾರ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.