ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹಮ್ಮದ್ ಶಾ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾ ಮಾಡಿದೆ.
ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಲಿಂದರ್ ಕೌರ್ ಅವರಿದ್ದ ಪೀಠ ಆದೇಶ ನೀಡಿತು. ಶಾ ಅವರಿಗೆ ಜಾಮೀನು ನೀಡುವುದನ್ನು ನಿರಾಕರಿಸಿ 2023ರಲ್ಲಿಯೇ ವಿಚಾರಣಾ ನ್ಯಾಯಾಲಯವೊಂದು ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಶಾ ಅವರು ಹೈಕೊರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
‘ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದೇನೆ. ಪ್ರಕರಣದ ವಿಚಾರಣೆ ಮುಗಿಯುವುದಕ್ಕೆ ಹಲವು ವರ್ಷಗಳು ಬೇಕಾಗಬಹುದು. ಈ ಪ್ರಕರಣವೇನು ಅತ್ಯಂತ ಮಹತ್ವದ್ದಲ್ಲ. ಆದ್ದರಿಂದ ಜಾಮೀನು ನೀಡಿ’ ಎಂದು ಶಾ ಅವರು 2023ರಲ್ಲಿ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.