ADVERTISEMENT

ಕಾಶ್ಮೀರ: ಉಗ್ರರ ಅಡಗುತಾಣ ನಾಶ

ಪಿಟಿಐ
Published 4 ಜನವರಿ 2026, 12:38 IST
Last Updated 4 ಜನವರಿ 2026, 12:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣವೊಂದನ್ನು ಭದ್ರತಾ ಪಡೆ ಅಧಿಕಾರಿಗಳು ನಾಶಗೊಳಿಸಿದ್ದಾರೆ.

ಅಡಗುತಾಣದಲ್ಲಿದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು. 

ಜಿಲ್ಲೆಯ ಶೀರಿ ಪ್ರದೇಶದಲ್ಲಿರುವ ಅರಣ್ಯದಲ್ಲಿ ಶನಿವಾರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಡಗುತಾಣ ಪತ್ತೆಯಾಯಿತು. ಎರಡು ಹ್ಯಾಂಡ್‌ ಗ್ರೆನೇಡ್‌ಗಳು, ಎಕೆ–47 ರೈಫಲ್‌ನ 24 ಗುಂಡುಗಳು, ವೈರ್‌ಲೆಸ್ ಆ್ಯಂಟೆನಾ ಹಾಗೂ ಒಂದು ಕೊಡಲಿ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.