ADVERTISEMENT

ಐಎಸ್‌ ಬೆಂಬಲಿತ ನಾಲ್ವರು ಉಗ್ರರ ಬಂಧನ

ಪಿಟಿಐ
Published 15 ಆಗಸ್ಟ್ 2022, 2:49 IST
Last Updated 15 ಆಗಸ್ಟ್ 2022, 2:49 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಚಂಡೀಗಡ: ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ದೆಹಲಿ ಪೊಲೀಸರು ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ ಗುಪ್ತಚರ ಸಂಘಟನೆ ಐಎಸ್ ಬೆಂಬಲಿತ ಉಗ್ರರ ಸಂಚನ್ನು ವಿಫಲಗೊಳಿಸಿ, ನಾಲ್ವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಬಂಧಿತರರಿಂದ ಮೂರು ಗ್ರೆನೇಡ್‌ಗಳು, ಒಂದು ಐಇಡಿ ಮತ್ತು ಎರಡು ಪಿಸ್ತೂಲ್‌ ಜತೆಗೆ 40 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತರಲ್ಲಿ ಕೆನಡಾ ಮೂಲದ ಆರ್ಶ್‌ ದಲ್ಲಾ ಮತ್ತು ಆಸ್ಟ್ರೇಲಿಯಾ ಮೂಲದ ಗುರ್ಜಂತ್ ಸಿಂಗ್ ಕೂಡ ಇದ್ದಾರೆ ಎಂದು ಪಂಜಾಬ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ವೇಳೆ ಭಯೋತ್ಪಾದಕ ಕೃತ್ಯ ನಡೆಸಲು ಉಗ್ರರು ಸಂಚು ಮಾಡಿದ್ದರು. ಪಂಜಾಬ್‌ ಮತ್ತು ಹರಿಯಾಣ ಹಾಗೂ ಚಂಡೀಗಡದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.