ಭದ್ರತಾ ಪಡೆ
(ಪಿಟಿಐ ಚಿತ್ರ)
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
2019ರ ಪುಲ್ವಾಮ ದಾಳಿಯ ನಂತರ ಕಣಿವೆ ರಾಜ್ಯದಲ್ಲಿ ನಡೆದ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
ಮೃತಪಟ್ಟ 26 ಮಂದಿಯಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಅವರ ಪತ್ನಿ ಪಲ್ಲವಿ ಹಾಗೂ ಎಂಟು ವರ್ಷದ ಪುತ್ರ ಸುರಕ್ಷಿತವಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ಶಸ್ತ್ರಸಜ್ಜಿತ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈ ದಾಳಿಯ ಹೊಣೆಯನ್ನು ಈವರೆಗೂ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.
ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾರತದ ಪ್ರವಾಸದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.