ಚಂದ್ರಬಾಬು ನಾಯ್ಡು
– ಪಿಟಿಐ
ಅಮರಾವತಿ: ಈ ಪ್ರಜಾಪ್ರಭುತ್ವ ದೇಶದಲ್ಲಿ ಉಗ್ರವಾದಕ್ಕೆ ಸ್ಥಾನವಿಲ್ಲ ಎಂದು ಟಿಡಿಪಿ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶುಕ್ರವಾರ ಹೇಳಿದರು.
ಆನಂತಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಾಕಿಸ್ತಾನದ ದಾಳಿಗೆ ನಮ್ಮ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದರು.
ಭಾರತದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ, ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾಯ್ಡು ಹೇಳಿದರು.
ಪಾಕ್ ದಾಳಿಯಲ್ಲಿ ಹುತಾತ್ಮರಾದ ಯೋಧ ಮುರುಳಿ ನಾಯಕ್‌ಗೆ ಸಂತಾಪ ಸೂಚಿಸಿದ ನಾಯ್ಡು, ಅವರ ಕುಟುಂಬದ ಜೊತೆ ಇಡೀ ದೇಶವೇ ಇದೆ ಎಂದು ಹೇಳಿದರು.
ನಾಯಕ್ ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ನಮ್ಮ ರಕ್ಷಣೆಗಾಗಿ ಯೋಧರು ವಿರಾಮ, ಆಹಾರ ಇಲ್ಲದೇ ದೇಶ ಸೇವೆ ಮಾಡುತ್ತಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.