ನವದೆಹಲಿ: ಸನಾತನ ಹಿಂದೂ ಧರ್ಮವನ್ನು ನಿರ್ನಾಮ ಮಾಡಲು ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ಉತ್ತರಪ್ರದೇಶದಲ್ಲಿಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಲವ್ ಜಿಹಾದ್ ರೂಪದಲ್ಲಿರುವ ಭಯೋತ್ಪಾದನೆ ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆ. ಇದರ ವಿರುದ್ಧ ಜನರು ಒಂದಾಗಬೇಕು ಎಂದು ಗಿರಿರಾಜ್ ಕರೆ ನೀಡಿದ್ದರು.
ಜನಸಂಖ್ಯೆ ನಿಯಂತ್ರಣ ಕಾನೂನುಗಳನ್ನು ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದ ಅವರು, ಚೀನಾದಲ್ಲಿ ಪ್ರತಿ ನಿಮಿಷಕ್ಕೆ 10 ಮಕ್ಕಳ ಜನನವಾದರೆ, ಭಾರತದಲ್ಲಿ ಪ್ರತಿ ನಿಮಿಷಕ್ಕೆ 31 ಶಿಶುಗಳು ಜನಿಸುತ್ತವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.