ADVERTISEMENT

ಜಮ್ಮು ಮತ್ತು ಕಾಶ್ಮೀರ: ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪಿಟಿಐ
Published 26 ಜೂನ್ 2025, 13:20 IST
Last Updated 26 ಜೂನ್ 2025, 13:20 IST
<div class="paragraphs"><p>ಭದ್ರತಾ ಪಡೆ</p></div>

ಭದ್ರತಾ ಪಡೆ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.

ಭದ್ರತಾ ಪಡೆಗಳು ಬಸಂತ್‌ಗಢ ಅರಣ್ಯ ಪ್ರದೇಶದಲ್ಲಿ ‘ಆಪರೇಷನ್ ಬಿಹಾಲಿ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿವೆ. ಇದೇ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಈ ಅರಣ್ಯ ಪ್ರದೇಶದಲ್ಲಿ ನಾಲ್ವರು ಉಗ್ರರ ಗುಂಪು ಅಡಗಿರುವುದು ಖಚಿತವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಕಾರ್ಯಾಚರಣೆಗೆ ತುಸು ಅಡಚಣೆ ಉಂಟಾಗಿದೆ ಎಂದು ಜಮ್ಮು ವಲಯದ ಪೊಲೀಸ್ ಮಹಾನಿರ್ದೇಶಕ (ಐಜಿಪಿ) ಭೀಮ್ ಸೇನ್ ವಿವರಿಸಿದ್ದಾರೆ.

ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗುವುಕ್ಕೆ ಒಂದು ವಾರ ಬಾಕಿ ಇರುವಾಗಲೇ ಈ ಪ್ರದೇಶದಲ್ಲಿ ಭಾರಿ ಶಸ್ತ್ರಸಜ್ಜಿತ ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧರಿಸಿ ಬೃಹತ್ ಕಾರ್ಯಾಚರಣೆ ನಡೆಸಲಾಗಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.