ADVERTISEMENT

ಕಾಶ್ಮೀರ: ಶೋಪಿಯಾನ್‌ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮ, ಉಗ್ರನ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಫೆಬ್ರುವರಿ 2022, 8:23 IST
Last Updated 19 ಫೆಬ್ರುವರಿ 2022, 8:23 IST
ಸಾಂದರ್ಭಿಕ ಚಿತ್ರ – ಪಿಟಿಐ
ಸಾಂದರ್ಭಿಕ ಚಿತ್ರ – ಪಿಟಿಐ   

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಝೈನಾಪೊರಾ ಪ್ರದೇಶದ ಚೆರ್‌ಮಾರ್ಗ್ ಎಂಬಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ಆರಂಭಗೊಂಡಿತ್ತು. ಭಾರತೀಯ ಸೇನೆಯ ‘1–ರಾಷ್ಟ್ರೀಯ ರೈಫಲ್ಸ್’ ಹಾಗೂ ಜಮ್ಮು–ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದ್ದವು. ಇದೇ ವೇಳೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಭದ್ರತಾ ಪಡೆಗಳೂ ಪ್ರತಿ ದಾಳಿ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಈ ವರ್ಷ ಈವರೆಗೆ ಎಂಟು ಮಂದಿ ಪಾಕಿಸ್ತಾನಿ ಉಗ್ರರೂ ಸೇರಿದಂತೆ 24 ಉಗ್ರರನ್ನು ಕಾಶ್ಮೀರದಲ್ಲಿ ಹತ್ಯೆ ಮಾಡಲಾಗಿದೆ. ಕಳೆದ ವರ್ಷ ನಡೆದ ಹತ್ತಾರು ಎನ್‌ಕೌಂಟರ್‌ಗಳಲ್ಲಿ 171 ಉಗ್ರರನ್ನು ಹತ್ಯೆ ಮಾಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.