ಸಾಂದರ್ಭಿಕಚಿತ್ರ
ಜಮ್ಮು: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ಉಗ್ರರ ಅಡಗುತಾಣವನ್ನು ಪತ್ತೆ ಮಾಡಿ, ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡರು.
‘ಉಗ್ರರು ಅವಿತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸ್ಥಳದಲ್ಲಿದ್ದ ಸ್ಫೋಟಕಗಳು ಮತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿದ್ದೇವೆ. ರಾಷ್ಟ್ರವಿರೋಧಿ ಕೃತ್ಯ ಎಸಗುವವರನ್ನು ಹಿಮ್ಮೆಟ್ಟಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ’ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೊಹಿತ ಶರ್ಮ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.