ADVERTISEMENT

ಪುಲ್ವಾಮಾ: ಉಗ್ರನ ಹತ್ಯೆ ಮಾಡಿದ ಭದ್ರತಾ ಪಡೆಗಳು

ಐಎಎನ್ಎಸ್
Published 28 ಫೆಬ್ರುವರಿ 2023, 3:14 IST
Last Updated 28 ಫೆಬ್ರುವರಿ 2023, 3:14 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಇಲ್ಲಿನ ಅವಂತಿಪುರದ ಪಡ್ಗಂಪುರದ ಹೊರ ವಲಯದಲ್ಲಿ ಮಂಗಳವಾರ ಬೆಳಗ್ಗೆ ಎನ್‌ಕೌಂಟರ್‌ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಎನ್‌ಕೌಂಟರ್ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೇ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.