ADVERTISEMENT

ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 13:12 IST
Last Updated 10 ಡಿಸೆಂಬರ್ 2021, 13:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶಾನ್‌ ಚೌಕದ ಬಳಿ ಶುಕ್ರವಾರ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಹುತಾತ್ಮರಾದ ಪೊಲೀಸರನ್ನು ಮೊಹಮ್ಮದ್‌ ಸುಲ್ತಾನ್‌ ಹಾಗೂ ಫಯಾಜ್‌ ಅಹಮ್ಮದ್‌ ಎಂದು ಗುರುತಿಸಲಾಗಿದೆ.

'ಗುಲ್ಶಾನ್‌ ಚೌಕದ ಬಳಿ ಇರುವ ಪೊಲೀಸ್‌ ಚೌಕಿ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದರು. ಈ ವೇಳೆ ತೀವ್ರವಾಗಿ ಗಾಯಗೊಂಡ ಇಬ್ಬರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ದಾಳಿಯ ನಂತರ ಗುಲ್ಶಾನ್‌ ಚೌಕದ ಸುತ್ತಮುತ್ತಲಿನ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತವರೆದಿದ್ದು, ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.