ಪ್ರಾತಿನಿಧಿಕ ಚಿತ್ರ
ರಜೌರಿ/ ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಸೇನಾ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಫಲ್ ಗ್ರಾಮದ ಬಳಿ ಘಟನೆ ನಡೆದಿದ್ದು, ಯಾವುದೇ ಸಾವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ಮಾಹಿತಿ ಬಂದಿಲ್ಲ. ಮೂಲಗಳ ಪ್ರಕಾರ, ಉಗ್ರರು ಕಾಡಿನಲ್ಲಿ ಅವಿತುಕೊಂಡಿದ್ದು, ಸೇನಾ ವಾಹನ ಅದೇ ದಾರಿಯಲ್ಲಿ ಸಾಗುವಾಗ ದಾಳಿ ನಡೆಸಿದ್ದಾರೆ.
ಸೇನಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದಾರೆ, ಆ ಸಮಯದಲ್ಲಿ ಉಗ್ರರನ್ನು ತಟಸ್ಥಗೊಳಿಸುವುದು ಅವರ ಉದ್ದೇಶವಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.