ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ಖುಲ್‍ಚೋಹರ್ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ನಿಖರಮಾಹಿತಿ ಲಿಭಿಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡಲಾಗಿತ್ತು.
ಉಗ್ರರು ಭದ್ರತಾ ಪಡೆ ವಿರುದ್ಧ ಗುಂಡು ಹಾರಿಸಿದ್ದು, ಈ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಎನ್‍ಕೌಂಟರ್: ಮೂರು ಉಗ್ರರ ಹತ್ಯೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.