ADVERTISEMENT

ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ: ಮುಂಬೈ ಪೊಲೀಸರು ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಫೆಬ್ರುವರಿ 2025, 5:53 IST
Last Updated 12 ಫೆಬ್ರುವರಿ 2025, 5:53 IST
<div class="paragraphs"><p> ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

– ಪಿಟಿಐ ಚಿತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ತೆರಳುತ್ತಿದ್ದಾಗ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ನಡೆಸಬಹುದು ಎಂದು ಅಪರಿಚಿತರೊಬ್ಬರು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಜತೆಗೆ, ಇತರ ಏಜೆನ್ಸಿಗಳಿಗೂ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು.

ಪ್ಯಾರಿಸ್‌ನಲ್ಲಿ ಮಂಗಳವಾರ ನಡೆದ ‘ಎಐ ಆ್ಯಕ್ಷನ್‌’ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್‌ ಅವರೊಂದಿಗೆ ಸಹ ಅಧ್ಯಕ್ಷತೆ ವಹಿಸಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.