ದಳಪತಿ ವಿಜಯ್
(ಚಿತ್ರ ಕೃಪೆ–X @ANI)
ಚೆನ್ನೈ: ತಮಿಳಿನ ಖ್ಯಾತ ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರು ಮುಸ್ಲಿಂ ಬಾಂಧವರಿಗೆ ಶುಕ್ರವಾರ ಇಫ್ತಾರ್ ಕೂಟ ಆಯೋಜಿಸಿದ್ದರು.
ರಾಯಪೆಟ್ಟಾ ವೈಎಂಸಿಎ ಮೈದಾನದಲ್ಲಿ ಇಫ್ತಾರ್ ಕೂಟ ನಡೆದಿದೆ.
ಮುಸ್ಲಿಂ ಟೋಪಿ ಧರಿಸಿ, ಬಿಳಿ ಬಣ್ಣದ ಉಡುಪಿನಲ್ಲಿ ನಮಾಜ್ ಮಾಡಿದ ವಿಜಯ್, ಬಳಿಕ ರೋಜಾ ಉಪವಾಸ ಮುಗಿಸಿ ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ಜನರೊಂದಿಗೆ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಾರೆ. ವಿಜಯ್ ಅವರ ಫೋಟೊಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ವಿಜಯ್ ಅವರು ಪ್ರಾರ್ಥನೆ ಮಾಡುತ್ತಿದ್ದ ಜನರೊಂದಿಗೆ ಕುಳಿತಿದ್ದ ಅವರ ವಿಡಿಯೊವನ್ನು ಸುದ್ದಿಸಂಸ್ಥೆ 'ಎಎನ್‌ಐ' ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.