ಎ.ಐ. ಚಿತ್ರ
ಠಾಣೆ: ಪ್ರಕರಣವೊಂದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುವುದಾಗಿ ಬೆದರಿಸಿ, ಅವನ ಮಗನಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪೊಲೀಸರನ್ನೇ ಬಂಧಿಸಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ.
ನವಿ ಮುಂಬೈನ ಶಿವಾಜಿ ಚೌಕ ಬಳಿ ಆರೋಪಿಯ ಮಗನಿಂದ ₹50 ಸಾವಿರ ಲಂಚ ಪಡೆಯುವಾಗ ಸಬ್ ಇನ್ಸ್‌ಪೆಕ್ಟರ್ ಸಚಿನ್ ವೈಕರ್ ಮತ್ತು ಅವರ ಸಹಾಯಕ ರವೀಂದ್ರ ಬುಟ್ಟೆ ಎನ್ನುವವರು ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
‘ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಆರೋಪಿಗೆ ಜಾಮೀನು ರಹಿತ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಸೋಮವಾರ ಎಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು’ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.
ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವ ಪೊಲೀಸರ ವಿರುದ್ದ ಭ್ರಷ್ಟಾಚಾರ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.