ADVERTISEMENT

ಠಾಣೆ: ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

ಪಿಟಿಐ
Published 23 ಫೆಬ್ರುವರಿ 2025, 8:26 IST
Last Updated 23 ಫೆಬ್ರುವರಿ 2025, 8:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಠಾಣೆ: ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿ 34 ವರ್ಷದ ಮಹಿಳೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮತ್ತೊಬ್ಬ ಮಹಿಳೆ, ಆಕೆಯ ಪತಿ ಮತ್ತು ಅವರ ಮಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಸಂತ್ರಸ್ತೆಯು ಮಹಾರಾಷ್ಟ್ರ ಠಾಣೆಯ ಮಾಜಿವಾಡ ಪ್ರದೇಶದ ನಿವಾಸಿಯಾಗಿದ್ದು, ಮೂರು ವರ್ಷಗಳ ಹಿಂದೆ ಆರೋಪಿ ಮಹಿಳೆ, ಸಂತ್ರಸ್ತೆಯನ್ನು ಭೇಟಿಯಾಗಿದ್ದಳು. ಚಿತ್ರರಂಗದಲ್ಲಿನ ಉನ್ನತ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ, ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿದ್ದಾಳೆ. ಬಳಿಕ ಆಕೆಯನ್ನು ಸಿಂಗಾಪುರಕ್ಕೆ ಕರೆದೊಯ್ದಿದ್ದು, ಅಲ್ಲಿ ಆಕೆಯನ್ನು ಒಬ್ಬ ವ್ಯಕ್ತಿಗೆ ಪರಿಚಯಿಸಿದ್ದಾಳೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವ್ಯಕ್ತಿಯು ಸಂತ್ರಸ್ತೆಯನ್ನು ಸಿಂಗಾಪುರದಲ್ಲಿರುವ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಮುಂಬೈ ಹಾಗೂ ಇತರ ಸ್ಥಳಗಳಲ್ಲಿನ ಹೋಟೆಲ್‌ಗಳಲ್ಲಿ ವಿವಿಧ ಸಂದರ್ಭಗಳಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಮಹಿಳೆಯು ಕೃತ್ಯದ ವಿಡಿಯೊ ಚಿತ್ರೀಕರಿಸಿದ್ದು, ಸಂತ್ರಸ್ತೆಗೆ ಪದೇ ಪದೇ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ವಿಷಯದ ಕುರಿತು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಹಿಳೆ, ಆಕೆಯ ಪತಿ ಹಾಗೂ ಮಗಳು ಸೇರಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.