ನವದೆಹಲಿ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ‘ಜವಾನ್’ ಚಿತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಬುಧವಾರ ವಾಗ್ದಾಳಿ ನಡೆಸಿದೆ.
‘2004ರಿಂದ 2014ರ ವರೆಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಮತ್ತು ಆಡಳಿತವು ನಿಷ್ಕ್ರಿಯಗೊಂಡಿದ್ದನ್ನು ಜವಾನ್ ಚಿತ್ರವು ಬಿಚ್ಚಿಟ್ಟಿದೆ. ಇದಕ್ಕಾಗಿ ನಾವು ಶಾರುಖ್ ಖಾನ್ ಅವರಿಗೆ ಧನ್ಯವಾದ ಹೇಳಬೇಕು’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಚಲನಚಿತ್ರದ ಪೋಸ್ಟರ್ ಹಾಗೂ 9 ವರ್ಷಗಳಲ್ಲಿನ ಎನ್‌ಡಿಎ ನೇತೃತ್ವದ ಸರ್ಕಾರದ ಸಾಧನೆಗಳನ್ನು ಹಂಚಿಕೊಂಡಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್, 2ಜಿ ಮತ್ತು ಕಲ್ಲಿದ್ದಲು ಹಗರಣಗಳನ್ನು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವ ಭಾಟಿಯಾ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸ್ವಚ್ಛ ಆಡಳಿತ ನೀಡುತ್ತಿದ್ದು, ಕಳೆದ ಒಂಬತ್ತು ವರ್ಷಗಳಲ್ಲಿ ಯಾವುದೇ ಹಗರಣಗಳು ನಡೆದಿಲ್ಲ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.